Karnataka Health minister Ramesh Kumar threatened to quit minister post if government not tabled Karnataka Private Medical Establishments (KPME) Act in winter session.
ಸಚಿವ ಸ್ಥಾನ ತೊರೆಯುವ ಬೆದರಿಕೆ ಹಾಕಿದ ರಮೇಶ್ ಕುಮಾರ್? 'ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017' ಕುರಿತು ಕಾಂಗ್ರೆಸ್ ಪಕ್ಷದಲ್ಲಿಯೇ ಹಗ್ಗ-ಜಗ್ಗಾಟ ನಡೆಯುತ್ತಿದೆ. ಸಚಿವ ರಮೇಶ್ ಕುಮಾರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.ಮಸೂದೆಯನ್ನು ಮಂಡನೆ ಮಾಡಬಾರದು ಎಂದು ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರದಿಂದ ಉಪವಾಸ ನಡೆಸಲಿದ್ದಾರೆ. ಸರ್ಕಾರದ ಜೊತೆ ವೈದ್ಯರು ನಡೆಸಿದ ಮಾತುಕತೆ ಫಲ ನೀಡಿಲ್ಲ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದ್ದಲ್ಲಿಯೇ ಆರೋಗ್ಯ ಸಚಿವ ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಿದ್ದುಪಡಿ ವಿಧೇಯಕ ಮಂಡನೆಯಾಗಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.ವಿಧೇಯಕ ಮಂಡನೆಯಾಗದಿದ್ದರೆ ನಾನು ಸಚಿವ ಸ್ಥಾನ ತೊರೆಯುತ್ತೇನೆ ಎಂದು ಅವರು ಹೇಳಿದ್ದಾರೆ. ಯಾರದ್ದೋ ಪ್ರತಿಭಟನೆಗೆ ಹೆದರಿ ವಿಧೇಯಕ ಮಂಡನೆ ಆಗದಿದ್ದರೇ ಸರಿ ಹೋಗುವುದಿಲ್ಲ ಎಂದು ಸಿಎಂ ಬಳಿ ಹೇಳಿದ್ದಾರೆ.

Category
🗞
News